Adv

news21 ‌ ‌YELLAPURNews prakatane --------- ‌ kumar Oct9to15 ‌ ‌ ‌ ‌ IMG-20241009-195526

Tuesday, 8 February 2022

ಕಾಲೇಜಿನಲ್ಲಿ ಕಲ್ಲು ತೂರಾಟ, ಬಸ್ ಗಳ ಮೇಲೆ ಕಲ್ಲು ತೂರಾಟ, 144 ಸೆಕ್ಷನ್ ಅಡಿಯಲ್ಲಿ 2 ದಿನ ನಿಷೇಧಾಜ್ಞೆ

 

ಯಲ್ಲಾಪುರ/ಶಿವಮೊಗ್ಗ: ಹಿಜಾಬ್ ವಿರೋಧಿಸಿ ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರತಿಭಟನೆನಡೆಸಿ, ಕಾಲೇಜಿನಲ್ಲಿ ಕಲ್ಲು ತೂರಾಟ, ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ಸೋಮವಾರ ನಡೆದಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾಧ್ಯಂತ 144 ಸೆಕ್ಷನ್ ಅಡಿಯಲ್ಲಿ 2 ದಿನ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.

  ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳು ಕಾಲೇಜಿನ ಧ್ವಜ ಸ್ತಂಭವನ್ನು ಹತ್ತಿ ಕೇಸರಿ ಧ್ವಜವನ್ನು ಹಾರಿಸಿದ್ದಾರೆ. 

 ‌‌     ಶಿವಮೊಗ್ಗದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು ಹಿಜಾಬ್ ವಿರೋಧಿಸಿ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಪ್ರತಿಭಟನೆಗೆ ಇಳಿದಿದ್ದರು. ಜೈ ಶ್ರೀರಾಂ ಘೋಷಣೆ ಕೂಗುತ್ತಾ ಧರಣಿ, ಪ್ರತಿಭಟನೆ ನಡೆಸಿದ್ದರು. ಸ್ಥಳಕ್ಕೆ ಆಗಮಿಸಿದಂತ ಪೊಲೀಸರು ನಡುವೆ ವಾಗ್ವಾದ ನಡೆಸಿದ್ದರು. ಅಲ್ಲದೇ ಕಾಲೇಜಿನ ಆವರಣದಲ್ಲಿದ್ದಂತ ಧ್ವಜ ಕಂಬವೇರಿ ಕೇಸರಿ ಧ್ವಜವನ್ನು ಹಾರಿಸಿದ್ದರು.

      ಬಳಿಕ ಪೊಲೀಸರು ಲಾಠಿ ಚಾರ್ಜ್ ಕೂಡ ಮಾಡಲಾಗಿತ್ತು. ಸ್ವತಹ ಡಿಸಿಗಳೇ ಕಾಲೇಜಿಗೆ ಆಗಮಿಸಿ, ಮೊಕ್ಕಾಂ ಹೂಡಿ, ಪರಿಸ್ಥಿತಿ ನಿಯಂತ್ರಣಕ್ಕೆ ಮುಂದಾದರು. ಈ ನಡುವೆಯೂ ಪೊಲೀಸರ ಮೇಲೆ ಕಲ್ಲು ತೂರಾಟ, ಕಾಲೇಜು ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿತ್ತು. ಈ ಎಲ್ಲಾ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ತಹಶೀಲ್ದಾರ್ ನಾಗರಾಜ್ ಅವರು ಜಿಲ್ಲೆಯಾದ್ಯಂತ 144 ಸೆಕ್ಷನ್ ಅಡಿಯಲ್ಲಿ 2 ದಿನ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಿದ್ದಾರೆ.