Adv

news21 ‌ ‌YELLAPURNews prakatane --------- ‌ ‌patanakaroct10to17pydkumar Oct9to15 ‌ ‌ ‌ ‌ ‌ oct5to15-pyd ‌‌ ‌ Vishal-sep13to-unlimited ‌ ‌ ‌ ‌ IMG-20241009-195526

Friday 12 July 2024

ಯಲ್ಲಾಪುರ ಸರ್ಕಾರಿ ನೌಕರರ ಸಂಘದಿಂದ ಮುಖ್ಯಮಂತ್ರಿ ಮತ್ತು ಶಾಸಕರಿಗೆ ಮನವಿ

ಯಲ್ಲಾಪುರ : ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕಾ ಘಟಕವು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಶುಕ್ರವಾರ ಸಂಜೆ ತಹಶೀಲ್ದಾರ ಮೂಲಕ ಮುಖ್ಯಮಂತ್ರಿ ಮತ್ತು ಶಾಸಕ ಶಿವರಾಮ ಹೆಬ್ಬಾರ್ ಅವರಿಗೆ ಮನವಿ ಸಲ್ಲಿಸಿತು.
  7ನೇ ವೇತನ ಆಯೋಗದ ವರದಿಯ ಅನುಷ್ಠಾನ, ರಾಜ್ಯ ಸರ್ಕಾರಿ ನೌಕರರು 2022ರ ಜುಲೈ 1ರಿಂದ 7ನೇ ವೇತನ ಆಯೋಗದ ವರದಿಯ ಶಿಫಾರಸುಗಳ ಅನುಷ್ಠಾನವನ್ನು ಒತ್ತಾಯಿಸುತ್ತಿದ್ದಾರೆ. ಈ ವಿಳಂಬದಿಂದಾಗಿ ನೌಕರರಲ್ಲಿ ತೀವ್ರ ಅಸಮಾಧಾನ ಉಂಟಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
   ಹಳೆ ಪಿಂಚಣಿ ಯೋಜನೆಯ ಪುನರ್ಜೀವನ, ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿದಂತೆ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೆ ತರಬೇಕೆಂದು ನೌಕರರು ಒತ್ತಾಯಿಸಿದ್ದಾರೆ. ಎನ್‌ಪಿಎಸ್‌ ಯೋಜನೆಯು ನೌಕರರಿಗೆ ದುರ್ಬಲ ಆರ್ಥಿಕ ಭದ್ರತೆಯನ್ನು ಒದಗಿಸುತ್ತಿದೆ ಎಂದು ಅವರು ತಿಳಿಸಿದ್ದಾರೆ.
   ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ, ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಕುಟುಂಬಗಳಿಗೆ ನಗದು ರಹಿತ ಚಿಕಿತ್ಸೆ ಒದಗಿಸುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಶೀಘ್ರವಾಗಿ ಜಾರಿಗೆ ತರಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
   7ನೇ ವೇತನ ಆಯೋಗದ ಶಿಫಾರಸುಗಳಂತೆ ಫಿಟ್‌ಮೆಂಟ್‌ ಭತ್ಯೆಯನ್ನು ಕನಿಷ್ಠ ಶೇ. 27.50 ಕ್ಕೆ ಹೆಚ್ಚಿಸಿ ವೇತನ ನಿಗಧಿಪಡಿಸಬೇಕೆಂದು ಮತ್ತು 2022ರ ಜುಲೈ 1ರಿಂದ ಆರ್ಥಿಕ ಪ್ರಯೋಜನಗಳನ್ನು ಜಾರಿಗೆ ತರಬೇಕೆಂದು ನೌಕರರು ಒತ್ತಾಯಿಸುತ್ತಾರೆ.
    ರಾಜ್ಯದಲ್ಲಿ 2.60 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇವೆ, ಇದು ಉಳಿದ ನೌಕರರ ಮೇಲೆ ಹೆಚ್ಚಿನ ಹೊರೆ ಹಾಕಿ ಅವರ‌ ಅನಾರೋಗ್ಯಕ್ಕೆ ಕಾರಣವಾಗುತ್ತಿದೆ ಎಂದು ತಿಳಿಸಲಾಗಿದೆ. 
   ತಹಶೀಲ್ದಾರ ಕಚೇರಿಯಲ್ಲಿ ತಹಶೀಲ್ದಾರ್ ಅಶೋಕ್ ಭಟ್ ಮನವಿ ಸ್ವೀಕರಿಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ರವಾನಿಸುವ ಭರವಸೆ ನೀಡಿದರು. ತಮ್ಮ ಖಾಸಗಿ ಕಚೇರಿಯಲ್ಲಿ ಮನವಿ ಸ್ವೀಕರಿಸಿದ ಶಾಸಕ ಶಿವರಾಮ ಹೆಬ್ಬಾರ್ ಸರಕಾರದ ಗಮನಕ್ಕೆ ತರುವುದಾಗಿ ಭರವಸೆ ನೀಡಿದರು.
   ಮನವಿ ನೀಡುವ ಸಂದರ್ಭದಲ್ಲಿ ತಾಲೂಕ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪ್ರಕಾಶ ನಾಯಕ, ಪ್ರಧಾನ ಕಾರ್ಯದರ್ಶಿ ಶರಣಪ್ಪ ಗುಜನೂರು, ಖಜಾಂಚಿ ಎಸ್ ಆರ್ ನಾಯಕ, ರಾಜ್ಯ ಪರಿಷತ್ ಸದಸ್ಯ ಸಂಜೀವ್ ಕುಮಾರ್ ಹೊಸ್ಕೇರಿ, ಶಿರಸಿ ಶೈಕ್ಷಣಿಕ ಜಿಲ್ಲೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾರಾಯಣ ನಾಯಕ, ತಾಲೂಕಾ ಸಂಘದ ಲೆಕ್ಕಪರಿಶೋಧಕ ಗಂಗಾಧರ ಪಟಗಾರ, ತಾಲೂಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಆರ್ ಆರ್ ಭಟ್, ಅರಣ್ಯ ಇಲಾಖೆಯ ಪ್ರತಿನಿಧಿ ಶ್ರೀನಿವಾಸ್ ನಾಯ್ಕ ಹಾಗೂ ಸಂತೋಷ್ ಜಿ, ತಾಲೂಕ ಪಂಚಾಯತಿ ಪ್ರತಿನಿಧಿ ನಾರಾಯಣ ಗೌಡ, ಮಂಜುನಾಥ್ ಆಗೇರ್, ಕಂದಾಯ ಇಲಾಖೆಯ ಪ್ರತಿನಿಧಿ ಜ್ಯೋತಿ ನಾಯ್ಕ ಆರೋಗ್ಯ ಇಲಾಖೆಯ ಪ್ರತಿನಿಧಿ ಎಸ್ ಟಿ ಭಟ್, ಹಿಂದುಳಿದ ವರ್ಗಗಳ ಇಲಾಖೆಯ ಪ್ರತಿನಿಧಿ ದಾಕ್ಷಾಯಿಣಿ ನಾಯ್ಕ ಸೇರಿದಂತೆ ನೂರಾರುವಸರ್ಕಾರಿ ನೌಕರರು ಮನವಿ ನೀಡುವ ಸಂದರ್ಭದಲ್ಲಿ ಇದ್ದರು.