ಕಲ್ಬುರ್ಗಿ/ಯಲ್ಲಾಪುರ : ಶಾಸಕ ಶಿವರಾಮ ಹೆಬ್ಬಾರ್ ಅವರು ಗುರುವಾರ ಅಪಜಲಪುರ ತಾಲೂಕಿನ ಗಾಣಿಗಾಪುರ ದತ್ತಾತ್ರೇಯ ದೇವಾಲಯದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯ ಕುರಿತಂತೆ ಕಲ್ಬುರ್ಗಿಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಅರ್ಜಿ ಸಮಿತಿ ಸಭೆಯಲ್ಲಿ ಪಾಲ್ಗೊಂಡು ಸಲಹೆ ಸೂಚನೆ ನೀಡಿದರು.
ಪುರಾಣಪ್ರಸಿದ್ದ ಶ್ರೀ ಕ್ಷೇತ್ರ ಗಾಣಗಾಪುರದ ದತ್ತಾತ್ರೇಯ ದೇವಾಲಯಕ್ಕೆ ಆಗಮಿಸುವ ಭಕ್ತಾದಿಗಳ ವಸತಿ ಯೋಜನೆ ಹಾಗೂ ಮೂಲಭೂತ ಸೌಕರ್ಯಗಳ ಕುರಿತಂತೆ ಶಾಸಕರು ಅಧಿಕಾರಿಗಳೊಂದಿಗೆ ವಿಸ್ತೃತವಾಗಿ ಚರ್ಚಿಸಿ, ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ವಿಧಾಸಭೆಯ ಉಪಸಭಾಪತಿ ರುದ್ರಪ್ಪ ಲಮಾಣಿ, ಶಾಸಕರಾದ ಸುರೇಶ ಕುಮಾರ್, ಎಸ್ ಟಿ ಸೋಮಶೇಖರ್, ಅಫಜಲ್‌ಪುರ ಶಾಸಕರು. ಜಿಲ್ಲಾಧಿಕಾರಿ ಫೌಜಿಯಾ, ಅಪರಜಿಲ್ಲಾಧಿಕಾರಿ ರಾಯಪ್ಪ ಸೇರಿದಂತೆ ಸಂಬಂದಿಸಿದ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.