Adv

news21 ‌ ‌YELLAPURNews prakatane --------- ‌ kumar Oct9to15 ‌ ‌ ‌ ‌ IMG-20241009-195526

Sunday, 7 July 2024

ಉತ್ತರಕನ್ನಡ ಜಿಲ್ಲೆ, ಯಲ್ಲಾಪುರದಲ್ಲಿ ಇಳಿದ ಮಳೆ, ಜನಜೀವನ ಸಹಜ ಸ್ಥಿತಿಯತ್ತ

ಯಲ್ಲಾಪುರ : ಉತ್ತರ ಕನ್ನಡದಲ್ಲಿ ಮಳೆ ಆರ್ಭಟ ಕಡಿಮೆಯಾಗಿದೆ. ಹಾಗೆಯೇ ಯಲ್ಲಾಪುರದಲ್ಲಿಯೂ ಮಳೆ ನೀರು ಇಳಿದಿದೆ. 3-4 ದಿನಗಳ ಕಾಲ ಬಿಟ್ಟೂ ಬಿಡದೆ ಕಾಡಿದ್ದ ಮಳೆ ಸಾಕಷ್ಟು ಅವಾಂತರಕ್ಕೆ ಕಾರಣವಾಗಿತ್ತು. ಭಟ್ಕಳ ಹೊರತುಪಡಿಸಿ ಶನಿವಾರ ಮಳೆಯ ಪ್ರಮಾಣ ಎಲ್ಲೆಡೆ ಕಡಿಮೆಯಾಗಿದೆ. ಎಲ್ಲಾ ರಸ್ತೆಗಳೂ ಸಂಚಾರಕ್ಕೆ ಮುಕ್ತವಾಗಿವೆ. ಜಲಾವೃತಗೊಂಡ ಮನೆಗಳಲ್ಲಿನ ಜನತೆ ನಿರಾಳರಾಗಿದ್ದಾರೆ. ಹಳ್ಳ ಕೊಳ್ಳಗಳಲ್ಲಿನ ನೀರಿನ ಪ್ರಮಾಣವೂ ಇಳಿದಿದೆ. ಜನಸಂಚಾರ ಮಾಮೂಲಿಯಾಗುತ್ತಿದೆ.
ಮಳೆಯ ಪ್ರಮಾಣ ಕಡಿಮೆಯಾದ ಬೆನ್ನಲ್ಲೇ ಜನಜೀವನ ಸಹಜ ಸ್ಥಿತಿಯತ್ತ ;
   ಜಿಲ್ಲೆಯಲ್ಲಿ ಶನಿವಾರ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದಿದ್ದ ಬಹುತೇಕರು ತಮ್ಮ ನಿವಾಸಗಳಿಗೆ ತೆರಳಿದ್ದಾರೆ. ಪ್ರಸ್ತುತ 8 ಕಾಳಜಿ ಕೇಂದ್ರಗಳಲ್ಲಿ 26 ಜನರು ಆಶ್ರಯ ಪಡೆದಿದ್ದು, ಅವರಿಗೆ ಎಲ್ಲ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಕೆ. ತಿಳಿಸಿದ್ದಾರೆ. 
  ಜಿಲ್ಲೆಯಲ್ಲಿ ತೀವ್ರ ಮಳೆಯಿಂದ ತೊಂದರೆಗೊಳಗಾದ ವಿವಿಧ ಗ್ರಾಮಗಳ ಸಾರ್ವಜನಿಕರಿಗೆ ಹೊನ್ನಾವರದಲ್ಲಿ 7 ಮತ್ತು ಕುಮಟಾದಲ್ಲಿ 1 ಸೇರಿದಂತೆ ಒಟ್ಟೂ ಕಾಳಜಿ ಕೇಂದ್ರ ಮುಂದುವರಿದಿವೆ. ಅಗತ್ಯವಿದ್ದಲ್ಲಿ ಇನ್ನೂ ಹೆಚ್ಚಿನ ಕಾಳಜಿ ಕೇಂದ್ರಗಳನ್ನು ತೆರೆಯುವಂತೆ ಸಂಬಂಧಪಟ್ಟ ತಾಲೂಕುಗಳ ತಹಸೀಲ್ದಾರರಿಗೆ ಸೂಚನೆ ನೀಡಲಾಗಿದೆ.
ಕಾಳಜಿ ಕೇಂದ್ರಗಳಲ್ಲಿ ವ್ಯವಸ್ಥೆ ;
    ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆದಿರುವವರಿಗೆ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳೊಂದಿಗೆ ಊಟದ ವ್ಯವಸ್ಥೆ ಮತ್ತು ರಾತ್ರಿ ತಂಗಲು ಅಗತ್ಯವಿರುವ ಎಲ್ಲ ಸೌಕರ್ಯಗಳನ್ನು ಒದಗಿಸಲಾಗಿದೆ. ವೈದ್ಯರ ತಂಡದಿಂದ ಆರೋಗ್ಯ ಪರಿಶೀಲನೆ ಮತ್ತು ಅಗತ್ಯವಿರುವ ಔಷಧ ಸೌಲಭ್ಯವನ್ನು ಒದಗಿಸಲಾಗಿದೆ ಎಂದು ವಿವರಿಸಲಾಗಿದೆ.
ಮಾನವ ಜೀವ ಹಾನಿ ತಡೆಗೆ ಮುನ್ನೆಚ್ಚರಿಕೆ  ;
   ಶನಿವಾರ ಕಾಳಿ ನದಿ ವ್ಯಾಪ್ತಿಯ ಕದ್ರಾ ಅಣೆಕಟ್ಟೆಯ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿದ್ದು, ಅಣೆಕಟ್ಟಿನಲ್ಲಿ ನೀರಿನ ಪ್ರಮಾಣವು ಜಿಲ್ಲಾಡಳಿತ ನಿಗದಿಪಡಿಸಿದ ಗರಿಷ್ಠ ಮಟ್ಟಕ್ಕಿಂತ ಕಡಿಮೆಯಾಗಿದೆ. ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಮನೆಗಳಿಗೆ ಭಾಗಶಃ ಹಾನಿಯಾಗಿದೆ. 
  ಬೆಂಗಳೂರುದಿಂದ ಆಗಮಿಸಿರುವ ರಾಷ್ಟ್ರೀಯ ವಿಪತ್ತು ನಿರ್ವಹಣೆಯ 2 ತಂಡಗಳು ಮಂಕಿಯ ಪ್ರಾಕೃತಿಕ ವಿಕೋಪ ಕೇಂದ್ರದಲ್ಲಿ ತಂಗಿದ್ದು, ಯಾವುದೇ ತುರ್ತು ಕಾರ್ಯಾಚರಣೆಗೆ ಸಕಲ ರೀತಿಯ ಸನ್ನದ್ಧತೆಯನ್ನು ತೋರಿಸುತ್ತಿವೆ. 
ಶಿರಸಿ ರಸ್ತೆಯಲ್ಲಿ ಬಿದ್ದ ಮರ ;
ಯಲ್ಲಾಪುರದಲ್ಲಿ ಮರ ಬಿದ್ದು ಹಾನಿಯಾಗಿದೆ. ಪಟ್ಟಣದ ಶಿರಸಿ ರಸ್ತೆಯಲ್ಲಿ ಶನಿವಾರ ರಾತ್ರಿ ಗಾಳಿಗೆ ಜಂಬೆ ಮರ ಬುಡ ಸಮೇತ ಉರುಳಿ ಬಿದ್ದಿದೆ.