
ತೋಟಗಾರಿಕೆ ಇಲಾಖೆ ವತಿಯಿಂದ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಯಲ್ಲಾಪುರ ; ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಅಳವಡಿಸಲು ರೈತರು ಅರ್ಜಿ ಸಲ್ಲಿಸಬಹುದಾಗಿದೆ. ತೋಟಗಾರಿಕೆಯಲ್ಲಿ ಬಳಸಬಹುದಾದ ವಿವಿಧ ಯಂತ್ರೋಪಕರಣ ಖರೀದಿಸಲು ಹಾಗೂ ಸೋಲಾರ್ ಪಂಪಸೆಟ್ ಗಳನ್ನು ಖರೀದಿಸಲು ಆಸಕ್ತ ರೈತರು ಇಲಾಖೆಯಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರಾದ ಸತೀಶ ಹೆಗಡೆ ಹಾಗೂ ಸಹಾಯಕ ತೋಟಗಾರಿಕಾ ಅಧಿಕಾರಿ ಕೀರ್ತಿ ಬಿ ಎಮ್ ತಿಳಿಸಿದ್ದಾರೆ.

ಜುಲೈ 31ರೊಳಗೆ ಮರುವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ರೈತರು ಹೆಸರು ನೋಂದಾಯಿಸಿ
ಯಲ್ಲಾಪುರ : ತಾಲೂಕಿನಲಿ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯು ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳನ್ನು ಒಳಗೊಂಡಿದ್ದು ಅಡಿಕೆಗೆ ಒಟ್ಟು ವಿಮಾಮೊತ್ತ ಪ್ರತಿ ಎಕರೆಗೆ 51,200 ರೂ, ಇರಲಿದ್ದು ರೈತರು ಪಾವತಿಸಬೇಕಾದ ಒಟ್ಟು ವಿಮಾ ಕಂತು 2,590 ರೂ ಇರಲಿದೆ. ಕಾಳುಮೆಣಸು ಬೆಳೆಗೆ ಒಟ್ಟು ವಿಮಾ ಮೊತ್ತ18,800 ರೂ ಇರಲಿದ್ದು, ರೈತರು ಪಾವತಿಸಬೇಕಾದ ವಿಮಾ ಕಂತು 951 ರೂ ಆಗಲಿದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರಾದ ಸತೀಶ ಹೆಗಡೆ ತಿಳಿಸಿದ್ದಾರೆ.
ಬೆಳೆ ಸಾಲ ಪಡೆದ ರೈತರು ಸಂಬಂಧಿಸಿದ ಬ್ಯಾಂಕಗಳ ಮೂಲಕ ಹಾಗೂ ಬೆಳೆ ಸಾಲ ಪಡೆಯದ ರೈತರು ಬ್ಯಾಂಕ, ಸಾಮಾನ್ಯ ಸೇವಾ ಕೇಂದ್ರ , ಗ್ರಾಮ ಒನ್ ಕೇಂದ್ರಗಳ ಮೂಲಕ ಯೋಜನೆಯಡಿ ನೋಂದಾಯಿಸಬಹುದಾಗಿದೆ. ರೈತರ ನೋಂದಣಿಗೆ ಎಫ್. ಐ. ಡಿ. ಕಡ್ಡಾಯವಾಗಿದೆ. ಬೆಳೆ ಸಾಲ ಪಡೆಯುವ ರೈತರು ಸದರಿ ಯೋಜನೆಯಿಂದ ಹೊರಗುಳಿಯಲು ಇಚ್ಛಿಸಿದಲ್ಲಿ ಅಂತಿಮ ದಿನಾಂಕದ ಒಂದು ವಾರದ ಒಳಗಾಗಿ ಸಂಬಂಧಿಸಿದ ಬ್ಯಾಂಕ ವ್ಯವಸ್ಥಾಪಕರಿಗೆ ಲಿಖಿತವಾಗಿ ತಿಳಿಸಬಹುದಾಗಿರುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.
