Adv

news21 ‌ ‌YELLAPURNews prakatane --------- ‌ ‌patanakaroct10to17pydkumar Oct9to15 ‌ ‌ ‌ ‌ ‌ oct5to15-pyd ‌‌ ‌ Vishal-sep13to-unlimited ‌ ‌ ‌ ‌ IMG-20241009-195526

Wednesday 14 August 2024

78ನೇ ಸ್ವಾತಂತ್ರ್ಯೋತ್ಸವ ವಾಕಥಾನ್: ಯಲ್ಲಾಪುರದಲ್ಲಿ ರಾಷ್ಟ್ರಾಭಿಮಾನ ಪ್ರದರ್ಶನ

ಯಲ್ಲಾಪುರ: 78ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ, ಯಲ್ಲಾಪುರ ತಾಲೂಕ ಆಡಳಿತವು ಆಗಸ್ಟ್ 14ರ ಬೆಳಿಗ್ಗೆ ವಾಕಥಾನ್ ಜಾಥಾ ನಡೆಸಿತು. ಭಾರತ ಸ್ಕೌಟ್ಸ್ ಗೈಡ್ಸ್, ಭಾರತ ಸೇವಾದಳ, ಎನ್‌ಸಿಸಿ, ಪೊಲೀಸ್ ಇಲಾಖೆ, ಗೃಹರಕ್ಷಕ ದಳದ ಸದಸ್ಯರು, ತಾಲೂಕ ಆಡಳಿತದ ಹಿರಿಯ ಅಧಿಕಾರಿಗಳು ಮತ್ತು ಅಂಗನವಾಡಿ ಕಾರ್ಯಕರ್ತೆಯರು ರಾಷ್ಟ್ರಧ್ವಜಗಳನ್ನು ಹಿಡಿದು ಪಟ್ಟಣದಲ್ಲಿ ಜಾಥಾ ನಡೆಸಿದರು.

ತಹಶೀಲ್ದಾರ್ ಕಚೇರಿಯಲ್ಲಿ ಹಸಿರು ನಿಶಾನೆ ತೋರಿಸಿ ಜಾಥಾಗೆ ಚಾಲನೆ ನೀಡಿದ ಶಾಸಕ ಶಿವರಾಮ ಹೆಬ್ಬಾರ್ ಅವರು ಜಾಥಾದಲ್ಲಿ ಪಾಲ್ಗೊಂಡರು. ಅದಕ್ಕೂ ಮುನ್ನ ಮಾತನಾಡಿದ ಶಾಸಕರು, "ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನ ಅವಿಸ್ಮರಣೀಯವಾಗಿದೆ. ಅವರ ತ್ಯಾಗದಿಂದಾಗಿ ನಾವು ಸ್ವತಂತ್ರ ದೇಶದಲ್ಲಿ ಬದುಕುತ್ತಿದ್ದೇವೆ. ಅವರ ಆದರ್ಶಗಳು ನಮಗೆ ಮಾರ್ಗದರ್ಶನ ನೀಡುತ್ತವೆ" ಎಂದು ಶಾಸಕ ಹೆಬ್ಬಾರ್ ಅವರು ಹೇಳಿದರು.


   ಜಾಥಾದಲ್ಲಿ ತಹಶೀಲ್ದಾರ್ ಅಶೋಕ್ ಭಟ್, ಕ್ಷೇತ್ರ ಶಿಕ್ಷಣಾಧಿಕಾರಿ ಎನ್‌ಆರ್ ಹೆಗಡೆ, ಗ್ರೇಡ್ 2 ತಹಶೀಲ್ದಾರ್ ಸಿಜಿ ನಾಯ್ಕ, ಪೊಲೀಸ್ ಇನ್ಸ್‌ಪೆಕ್ಟರ್ ರಮೇಶ್ ಹಾನಪುರ್, ಪಿಎಸ್‌ಐ ಸಿದ್ದಪ್ಪ ಗುಡಿ, ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅಶೋಕ್ ಬಂಟ, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಸುನಿಲ್ ಗಾವಡೆ, ತಾಲೂಕ ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ರಾಜೇಶ್ ಧನವಾಡಕರ್, ತಾಲೂಕ ಪಂಚಾಯತ್ ವ್ಯವಸ್ಥಾಪಕ ರಾಮದಾಸ ನಾಯ್ಕ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಫಾತಿಮಾ ಜುಳ್ಕಿ, ಸಾಮಾಜಿಕ ಕಾರ್ಯಕರ್ತ ಡಾ. ರವಿ ಭಟ್ ಬರಗದ್ದೆ, ಸ್ಕೌಟ್ಸ್ ಗೈಡ್ಸ್ ಪ್ರಧಾನ ಕಾರ್ಯದರ್ಶಿ ಸುಧಾಕರ ನಾಯಕ, ಭಾರತ ಸೇವಾದಳದ ಸಂಘಟಕ ಸಂಜೀವ ಹೊಸ್ಕೇರಿ, ದೈಹಿಕ ಶಿಕ್ಷಣ ಪರೀವೀಕ್ಷಕ ಪ್ರಕಾಶ ತಾರಿಕೊಪ್ಪ ಮುಂತಾದವರು ಭಾಗವಹಿಸಿದರು.
   ವಿಶ್ವದರ್ಶನ ಶಿಕ್ಷಣ ಸಂಸ್ಥೆ, ಮುರಾರ್ಜಿ ವಸತಿ ಶಾಲೆ, ರೋಜರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಸ್ಕೌಟ್ಸ್ ಗೈಡ್ಸ್, ಸೇವಾ ದಳ, ಎನ್‌ಸಿಸಿ ವಿದ್ಯಾರ್ಥಿಗಳು ಜಾಥಾದಲ್ಲಿ ಪಾಲ್ಗೊಂಡರು. ಜಾಥಾ ಆಡಳಿತ ಸೌಧದಿಂದ ಆರಂಭವಾಗಿ, ರಾಷ್ಟ್ರೀಯ ಹೆದ್ದಾರಿ, ಗಾಂಧಿ ವೃತ್ತ, ಬಸವೇಶ್ವರ ವೃತ್ತ, ಅಂಬೇಡ್ಕರ್ ವೃತ್ತ, ಬೆಲ್ ರಸ್ತೆ, ಸಬಗೇರಿ ವೃತ್ತಗಳನ್ನು ಸುತ್ತುವರೆದು ಆಡಳಿತ ಸೌಧದಲ್ಲಿ ಮುಕ್ತಾಯಗೊಂಡಿತು.