ಯಲ್ಲಾಪುರ: ವಜ್ರಳ್ಳಿಯ ಸರ್ವೋದಯ ಕ್ರೀಡಾಂಗಣದಲ್ಲಿ ಗುರುವಾರ ಪ್ರೌಢಶಾಲಾ ವಲಯ ಮಟ್ಟದ ಇಲಾಖಾ ಕ್ರೀಡಾಕೂಟವನ್ನು ಉದ್ಘಾಟಿಸಲಾಯಿತು.
ಕ್ರೀಡಾ ಧ್ವಜಾರೋಹಣ ನೆರವೇರಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಎನ್ ಆರ್ ಹೆಗಡೆ. ಕ್ರೀಡೆಯ ಮಹತ್ವವನ್ನು ವಿವರಿಸಿ, "ಕ್ರೀಡೆ ನಮ್ಮ ಮಾನಸಿಕ ಕ್ಷಮತೆಯನ್ನು ಹೆಚ್ಚಿಸುತ್ತದೆ. ದೈಹಿಕ ಶ್ರಮವು ವ್ಯಕ್ತಿಯನ್ನು ಶಕ್ತಿಶಾಲಿಯಾಗಿಸುತ್ತದೆ" ಎಂದು ಹೇಳಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಭಗೀರಥ ನಾಯ್ಕ ಕ್ರೀಡಾ ಜ್ಯೋತಿ ಬೆಳಗಿಸಿ, "ಕ್ರೀಡಾಕೂಟವು ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸಲು ಮತ್ತು ಆರೋಗ್ಯವನ್ನು ಉತ್ತೇಜಿಸಲು ಸಹಕಾರಿಯಾಗಲಿದೆ" ಎಂದು ಹೇಳಿದರು.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಸರ್ವೋದಯ ಶಿಕ್ಷಣ ಸಮಿತಿಯ ಸದಸ್ಯ ಅಪ್ಪಣ್ಣ ಭಟ್ಟ ಬೆಣ್ಣೆಜಡ್ಡಿ, "ಕ್ರೀಡೆಯು ಗ್ರಾಮೀಣ ಭಾಗದಲ್ಲಿ ನಶಿಸುತ್ತಿರುವುದನ್ನು ವಿಷಾದಕರ" ಎಂದು ಅಭಿಪ್ರಾಯಪಟ್ಟರು.
ಅತಿಥಿಗಳಾದ ದೈಹಿಕ ಶಿಕ್ಷಣ ಪರಿವೀಕ್ಷಕ ಎಂ ಎನ್ ತಾರೀಕೊಪ್ಪ, ಸರ್ವೋದಯ ಸಂಸ್ಥೆಯ ಉಪಾಧ್ಯಕ್ಷ ಟಿ ಸಿ ಗಾಂವ್ಕರ್, ಮತ್ತು ಹಿರಿಯರಾದ ಜಿ ಎನ್. ಕೋಮಾರ ಉಪಸ್ಥಿತರಿದ್ದರು.