Adv

news21 ‌ ‌YELLAPURNews prakatane --------- ‌ kumar Oct9to15 ‌ ‌ ‌ ‌ IMG-20241009-195526

Monday, 16 September 2024

ಕಸ್ತೂರಿರಂಗನ್ ವರದಿಯ ಪ್ರದೇಶದ ಜನಪ್ರತಿನಿಧಿಗಳ ಸಭೆ ಸೆ.19ಕ್ಕೆ : ಜನಪ್ರತಿನಿಧಿಗಳ ಅಭಿಪ್ರಾಯಗಳ ಮನ್ನನೆ ದೊರಕುವದೇ? ಆತಂಕದಲ್ಲಿ ಸೂಕ್ಷ್ಮ ಪ್ರದೇಶದ ಜನರು.

IMG-20240916-155205 ಯಲ್ಲಾಪುರ/ಸಿದ್ದಾಪುರ: ಕಸ್ತೂರಿರಂಗನ್ ವರದಿ ಆಧರಿಸಿ ಪಶ್ಚಿಮ ಘಟ್ಟದಲ್ಲಿ ಪರಿಸರ ಸೂಕ್ಷ್ಮ ವಲಯ ಪ್ರದೇಶದ ಕರಡು ಅಧೀಸೂಚನೆಗೆ ಆಕ್ಷೇಪಣೆ ಸಲ್ಲಿಸಲು ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಕ್ಕೆ ಸೆ.30 ಕಾಲ ಮಾನದಂಡ ನಿಗದಿಗೊಳಿಸಿರುವ ಹಿನ್ನಲೆಯಲ್ಲಿ ಸೂಕ್ಷ್ಮ ಪ್ರದೇಶದ ಮತ್ತು ಸಚಿವ ಸಂಪುಟದ ವಿಶೇಷ ಸಭೆ ಸೆ.19ರಂದು ನಿಗದಿಗೊಳಿಸಿದ್ದು ಜನಪ್ರತಿನಿಧಿಗಳ ಅಭಿಪ್ರಾಯಕ್ಕೆ ಕೇಂದ್ರ ಸರ್ಕಾರ ಮಂಡನೆ ನೀಡುವದೇ ಎಂಬ ಆತಂಕ ಸೂಕ್ಷ್ಮ ಪ್ರದೇಶದ ಜನರಲ್ಲಿ ಆತಂಕ ಉಂಟಾಗಿದೆ ಎಂದು ಹೋರಾಟಗಾರ ರವೀಂದ್ರ ನಾಯ್ಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 
   ಕರಡು ಕಸ್ತೂರಿ ರಂಗನ್ ವರದಿಯ ಜಾರಿಗೆ ಸಂಬಂಧಿಸಿ ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾದ ಕಳೆದ 10 ವರ್ಷದಿಂದ ವರದಿ ಅನುಷ್ಟಾನಕ್ಕೆ ವಿರೋಧ ವ್ಯಕ್ತವಾಗುತ್ತಿದೆ ಜಿಲ್ಲಾ ಪಂಚಾಯತ, ವಿವಿಧ ತಾಲೂಕ ಪಂಚಾಯತ, ಗ್ರಾಮ ಪಂಚಾಯತಗಳಲ್ಲಿ ವರದಿಗೆ ವಿರೋಧವಾಗಿ ಠರವು ಸ್ವೀಕರಿಸಲಾಗಿತ್ತು. ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯು 1 ಲಕ್ಷ ಕುಂಟುಬಗಳಿಂದ ಕೇಂದ್ರ ಸರ್ಕಾರಕ್ಕೆ ಆಕ್ಷೇಪಣಾ ಪತ್ರ ಸಲ್ಲಿಸಲಾಗಿತ್ತು ಎಂದು ರವೀಂದ್ರ ನಾಯ್ಕ ಹೇಳಿದರು. IMG-20240916-155156 ಅಲ್ಲದೇ, ವಿಧಾನ ಸಭೆ ಅಧಿವೇಶನದಲ್ಲಿಯೂ ತಿರಸ್ಕರಿಸಲು ಸರ್ವಾನು ಮತದಿಂದ ಪಕ್ಷತಿತವಾಗಿ ತೀರ್ಮಾನಿಸಿದಾಗಿಯೂ ಕೇಂದ್ರ ಸರ್ಕಾರ ವಿರೋಧಕ್ಕೆ ಮಾನ್ಯತೆ ನೀಡುವದೇ ಎಂಬ ಆತಂಕದಲ್ಲಿ ಸೂಕ್ಷ್ಮ ಪ್ರದೇಶದ ಜನರ ಚಿಂತೆಗೆ ಕಾರಣವಾಗಿದೆ ಎಂಬ ಅಭಿಪ್ರಾಯವನ್ನು ಅವರು ವ್ಯಕ್ತಪಡಿಸಿದರು. 
 ಉತ್ತರ ಕನ್ನಡ ಜಿಲ್ಲೆಯಲ್ಲಿ 604 ಹಳ್ಳಿ: 
 ಜಿಲ್ಲೆಯಲ್ಲಿನ 9 ತಾಲೂಕಗಳಲ್ಲಿ 604 ಹಳ್ಳಿಗಳು ಸೂಕ್ಷ್ಮ ಪ್ರದೇಶ ವ್ಯಾಪ್ತಿಯಲ್ಲಿ ಬರುತಿದ್ದು, ಜಿಲ್ಲೆಯ ಸುಮಾರು 138 ಗ್ರಾಮಪಂಚಾಯತ ವ್ಯಾಪ್ತಿಯಲ್ಲಿ ಅತೀ ಸೂಕ್ಷ್ಮ ಪ್ರದೇಶಗಳು ಗುರುತಿಸುವಿಕೆಯಾಗಿರುವುದರಿಂದ ಜಿಲ್ಲೆಯ ಭೌಗೋಳಿಕವಾಗಿ ಶೇ.60 ರಷ್ಟು ಸೂಕ್ಷ್ಮ ಪ್ರದೇಶ ವ್ಯಾಪ್ತಿಗೆ ಸೇರ್ಪಡೆಗೊಳೂವುದರಿಂದ ಜಿಲ್ಲೆಯ ಸಂಪೂರ್ಣ ಜನಜೀವನದ ವ್ಯವ್ಯಸ್ಥೆ ಮತ್ತು ಮೂಲಭೂತ ಸೌಕರ್ಯಗಳ ಮೇಲೆ ತೀವ್ರ ತರದ ಪರಿಣಾಮಬೀರುವುದೆಂದು ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
.
.