ಯಲ್ಲಾಪುರ: ಯಲ್ಲಾಪುರ ತಾಲೂಕಿನ ತಾಟವಾಳ ಗ್ರಾಮದ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸ್ಥಳೀಯ ಶಾಸಕ ಶಿವರಾಮ ಹೆಬ್ಬಾರ್ ಸಸಿ ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಪರಿಸರ ಸಂರಕ್ಷಣೆಯ ಮಹತ್ವವನ್ನು ನೆನೆಸಿದ ಶಾಸಕ ಶಿವರಾಮ ಹೆಬ್ಬಾರ್, ಪ್ರಕೃತಿಯ ಸಮತೋಲನ ಕಾಪಾಡುವುದು ಮತ್ತು ಪರಿಸರದ ಮೇಲೆ ಮಾನವೀಯ ಚಟುವಟಿಕೆಗಳ ಪರಿಣಾಮವನ್ನು ಕಡಿಮೆ ಮಾಡುವುದು ಅತ್ಯವಶ್ಯಕವಾಗಿದೆ. ಹಸಿರು ಅಭಿಯಾನವು ಮಾತ್ರ ಪರಿಸರ ಸಂರಕ್ಷಣೆಗೆ ಸಂಬಂಧಿಸಿದ ನಿರ್ಧಾರವಲ್ಲ, ಅದು ಜನರಿಗೆ ಪ್ರಜಾಪ್ರಭುತ್ವದ ಪ್ರಾಮುಖ್ಯತೆಯ ಬಗ್ಗೆ ಜಾಗೃತಿ ಮೂಡಿಸುವ ಒಂದು ವಿನೂತನ ವಿಧಾನವೂ ಆಗಿದೆ. ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ಪ್ರತಿಯೊಬ್ಬ ನಾಗರಿಕನ ಪಾಲಿನ ಜವಾಬ್ದಾರಿಯನ್ನು ನೆನಪಿಸುವ ಮತ್ತು ಪರಿಸರದ ಕುರಿತು ಅಗತ್ಯ ಕ್ರಮ ಕೈಗೊಳ್ಳುವ ಸಂದೇಶವನ್ನು ಅವರ ಸಸಿ ನೆಡುವ ಕಾರ್ಯಕ್ರಮದ ಮೂಲಕ ಹಂಚಿಕೊಂಡರು.
ಈ ಸಂದರ್ಭದಲ್ಲಿ ಶಾಸಕರು ಶಾಲೆಯ ಮೂಲ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು. ಶಾಲೆಯ ಮೂಲಭೂತ ಸೌಕರ್ಯಗಳನ್ನು ಸುಧಾರಿಸಲು ಮತ್ತು ಮಕ್ಕಳಿಗೆ ಉತ್ತಮ ಶಿಕ್ಷಣ ಸೌಲಭ್ಯಗಳನ್ನು ಒದಗಿಸಲು ಬೇಕಾದ ನಿರ್ಧಾರಗಳನ್ನು ಮುಖ್ಯ ಶಿಕ್ಷಕಿ ಗಂಗಾ ಟಾಕೂರ್ ಮತ್ತು ಸಹ ಶಿಕ್ಷಕರು ಹಾಗೂ ಎಸ್‌ಡಿಎಂಸಿ ಊರ ನಾಗರಿಕರೊಂದಿಗೆ ಚರ್ಚೆ ನಡೆಸಿದರು. ಶಾಲೆಯ ಮೂಲಭೂತ ಸೌಕರ್ಯಗಳ ಕೊರತೆಗಳನ್ನು ನಿವಾರಿಸಲು ಅಗತ್ಯತೆ ಬಗ್ಗೆ ತಮಗೆ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರುಗಳ ಗಮನಕ್ಕೆ ತರಬೇಕೆಂದು ಸೂಚಿಸಿದರು.
ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು, ಊರಿನ ನಾಗರಿಕರು ಹಾಗೂ ಗ್ರಾಮೀಣ ಪ್ರದೇಶದ ಪ್ರಮುಖರು ಭಾಗವಹಿಸಿದ್ದರು. ಕ್ಷೇತ್ರದ ಅಧಿಕಾರಿಗಳು ಕೂಡ ಈ ಸಮಾರಂಭದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದು, ಸ್ಥಳೀಯ ಆಡಳಿತವನ್ನು ಬಲಪಡಿಸಲು ಶಾಸಕರೊಂದಿಗೆ ಚರ್ಚೆ ನಡೆಸಿದರು.
ಯಲ್ಲಾಪುರ ತಹಶೀಲ್ದಾರ್ ಯಲ್ಲಪ್ಪ ಗೊನೆಣ್ಣನವರ, ಮುಂಡಗೋಡ ತಹಶೀಲ್ದಾರ ಶಂಕರ ಗೌಡ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ವಿಜಯ ಮಿರಾಶಿ, ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷೆ ಸುನಂದಾ ದಾಸ್ ಮೊದಲಾದ ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಅವರ ಉಪಸ್ಥಿತಿಯಿಂದ ಸ್ಥಳೀಯ ಸಮಸ್ಯೆಗಳ ಕುರಿತು ಚರ್ಚೆ ನಡೆಯಿತು.
ತಾಟವಾಳ ಶಾಲೆಯ ಮಕ್ಕಳು ಮಾನವ ಸರಪಳಿಯಲ್ಲಿ ಭಾಗವಹಿಸಿದ್ದ ಈ ಕಾರ್ಯಕ್ರಮವು ತಾಟವಾಳ ಗ್ರಾಮದ ಜನತೆಗೆ ಶಾಶ್ವತವಾಗಿ ನೆನಪಾಗುವಂತಹದ್ದಾಗಿದ್ದು, ಮಕ್ಕಳಿಗೆ ಪರಿಸರದ ಮಹತ್ವವನ್ನು ತಿಳಿಸುವ ಜೊತೆಗೆ, ಶಾಲೆಗೆ ಸಂಬಂಧಿಸಿದ ಸೌಲಭ್ಯಗಳನ್ನು ಸುಧಾರಿಸುವ ಕುರಿತ ಮಹತ್ವದ ನಿರ್ಣಯಗಳನ್ನು ತೆಗೆದುಕೊಂಡಿತು.
.
.
.