ಯಲ್ಲಾಪುರ : ಯಲ್ಲಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ವಿಜೃಂಭಣೆಯಿಂದ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ಆರ್.ಡಿ. ಜನಾರ್ಧನ್ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಗೌರವಾರ್ಪಣೆ ಸಲ್ಲಿಸಿದರು.
ನಂತರ ಮಾತನಾಡಿದ ಅವರು, ಇಂದಿನ ತಂತ್ರಜ್ಞಾನ ಯುಗದಲ್ಲಿ ಶಿಕ್ಷಕರ ಜವಾಬ್ದಾರಿ ಮತ್ತಷ್ಟು ಮಹತ್ವದ್ದಾಗಿದೆ. ವಿದ್ಯಾರ್ಥಿಗಳು ಗುರಿಯನ್ನು ಸ್ಪಷ್ಟವಾಗಿಟ್ಟುಕೊಂಡು, ಶಿಕ್ಷಕರ ಮಾರ್ಗದರ್ಶನದೊಂದಿಗೆ ಮುಂದುವರಿದರೆ ಯಶಸ್ಸನ್ನು ಸಾಧಿಸಬಹುದು ಎಂದು ಹೃತ್ಪೂರ್ವಕವಾಗಿ ನುಡಿದರು. ಅವರ ಮಾತಿನಲ್ಲಿ, ಶಿಕ್ಷಕರು ವಿದ್ಯಾರ್ಥಿಗಳ ಜೀವನ ರೂಪಿಸಲು ಪಣತೊಡಬೇಕು ಎಂಬ ಸಂದೇಶವನ್ನು ನೀಡಿದರು.
ಕಾರ್ಯಕ್ರಮದಲ್ಲಿ ನಿವೃತ್ತ ಸಾಧಕ ಶಿಕ್ಷಕರಾದ ಗೋಪಾಲಕೃಷ್ಣ ತಾಂಡುರಾಯನ್ ಹಾಗೂ ಯೋಗಪ್ಪ ಎಸ್ ಗೋಕುಲ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಅನಂತರ, ಕಾರ್ಯಕ್ರಮದಲ್ಲಿ ಆಯ್ಕ್ಯೂಎಎಸ್ ಸಂಚಾಲಕರಾದ ಶರತ್ ಕುಮಾರ, ಎನ್‌ಎಸ್ಎಸ್ ಕಾರ್ಯಕ್ರಮಾಧಿಕಾರಿಗಳಾದ ಸುರೇಖಾ ಎಸ್ ತಡವಲ ಮತ್ತು ಸವಿತಾ ನಾಯ್ಕ ಸೇರಿದಂತೆ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಭಾಗವಹಿಸಿದರು.
ವೇದಾ ಭಟ್ಟ ಅವರು ಅತಿಥಿಗಳನ್ನು ಸ್ವಾಗತಿಸಿ ಪರಿಚಯಿಸಿದರು. ದಿನೇಶ ನಾಯ್ಕ ವಂದಿಸಿದರು, ಮತ್ತು ನಂದಿತಾ ಭಾಗ್ವತ್ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಿರ್ವಹಿಸಿದರು.