![IMG-20240915-232002](https://i.ibb.co/pRBjVjj/IMG-20240915-232002.webp)
ಅವರು ರವಿವಾರ ಯಲ್ಲಾಪುರ ಪಟ್ಟಣದ ಅಡಿಕೆ ಭವನದಲ್ಲಿ ಸುಜ್ಞಾನ ಸೇವಾ ಫೌಂಡೇಷನ್, ಇ-ಯಲ್ಲಾಪುರ ಡಿಜಿಟಲ್ ನ್ಯೂಸ್, ಸುಜ್ಞಾನ ವಾಹಿನಿ ಪತ್ರಿಕೆ ವತಿಯಿಂದ, ಗೌತಮ ಜ್ಯುವೆಲರ್ಸ್, ಹಾಂಗ್ಯೊ ಐಸ್ ಕ್ರೀಂ, ಟಿ.ಎಸ್.ಎಸ್, ರಂಗ ಸಹ್ಯಾದ್ರಿ ಇವು ಸಹಯೋಗದಲ್ಲಿ ಆಯೋಜಿಸಿದ್ದ ಶ್ರೀಕೃಷ್ಣಾರ್ಪಣಂ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಮಕ್ಕಳ ಬಾಲ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಈ ಕಾರ್ಯಕ್ರಮವು ಬಹಳ ಮಹತ್ವದ್ದಾಗಿದೆ, ಮಕ್ಕಳಿಗೆ ಕೃಷ್ಣನ ವೇಷ ತೊಡಿಸುವ ಮೂಲಕ ಪಾಲಕರು ಸಂಭ್ರಮಿಸುವ ಮಾದರಿಯಾದ ಕಾರ್ಯಕ್ರಮ ಇದಾಗಿದೆ ಎಂದು ಶ್ಲಾಘಿಸಿದರು.
ಸಂಕಲ್ಪ ಸೇವಾ ಸಂಸ್ಥೆಯ ಅಧ್ಯಕ್ಷ ಪ್ರಮೋದ ಹೆಗಡೆ ಮಾತನಾಡಿ, ಮಕ್ಕಳಿಗೆ ಕೃಷ್ಣನ ವೇಷ ಹಾಕಿ ಸಂಭ್ರಮಿಸುವ ಜೊತೆಯಲ್ಲಿ ಪುರಾಣ, ಇತಿಹಾಸದ ಕುರಿತಾದ ಕಲ್ಪನೆಯನ್ನೂ ಮೂಡಿಸಿದಾಗ ಸಾರ್ಥಕತೆ ಬರುತ್ತದೆ. ಸುಜ್ಞಾನ ಸೇವಾ ಫೌಂಡೇಷನ್, ಇ-ಯಲ್ಲಾಪುರ ಡಿಜಿಟಲ್ ನ್ಯೂಸ್, ಸುಜ್ಞಾನ ವಾಹಿನಿ ಪತ್ರಿಕೆ ಹಾಗೂ ಸಂಘಟಕರ ಕಾರ್ಯ ಮಾದರಿಯಾಗಿದೆ ಎಂದರು.
![IMG-20240915-231954](https://i.ibb.co/3CKBVW6/IMG-20240915-231954.webp)
ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆಯ ವಿಜೇತರಾದ ಪ್ರಥಮ,ದ್ವಿತೀಯ,ತೃತೀಯ ಬಹುಮಾನ ವಿಜೇತರಾದ ಮಕ್ಕಳಿಗೆ ನಗದು ಬಹುಮಾನ, ಬೆಳ್ಳಿಯ ಸ್ಮರಣಿಕೆ, ಪಾರಿತೋಷಕ, ಪದಕ, ಪ್ರಶಸ್ತಿಪತ್ರ ಹಾಗೂ ಒಂಭತ್ತು ಸಮಾಧಾನ ಬಹುಮಾನ ವಿಜೇತರಿಗೆ ಪಾರಿತೋಷಕ, ಪದಕ, ಪ್ರಶಸ್ತಿ ಪತ್ರ ವಿತರಿಸಲಾಯಿತು.
ಈ ಸಮಾರಂಭದಲ್ಲಿ ಶಿರಸಿಯ ಸಾಮಾಜಿಕ ಕಾರ್ಯಕರ್ತ ಅನಂತಮೂರ್ತಿ ಹೆಗಡೆ ಅವರಿಗೆ ಪ್ರತಿಷ್ಠಿತ ಸುಜ್ಞಾನ ಸೇವಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಪ್ರಶಸ್ತಿ ಸ್ವೀಕರಿಸಿದ ಅನಂತಮೂರ್ತಿ ಹೆಗಡೆ ಮಾತನಾಡಿ, ಪ್ರೀತಿಯಿಂದ ಗೌರವಿಸಿರುವುದಕ್ಕೆ ಋಣಿಯಾಗಿದ್ದೇನೆ ಎಂದ ಅವರು, ಸಮಾಜಮುಖಿ ಕಾರ್ಯಕ್ರಮಗಳನ್ನು ನಿರಂತರವಾಗಿ ಸಂಘಟಿಸುತ್ತಾ, ಜವಾಬ್ದಾರಿಯುತವಾಗಿ ನಿರ್ವಹಣೆ ಮಾಡುತ್ತ ಬಂದಿರುವುದು ಶ್ಲಾಘನೀಯವಾಗಿದೆ ಎಂದರು.
ಸುಜ್ಞಾನ ಸೇವಾ ಫೌಂಡೇಷನ್ ಅಧ್ಯಕ್ಷ ಜಿ.ಎನ್.ಭಟ್ಟ ತಟ್ಟಿಗದ್ದೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಸ್ಥೆ ನಡೆದು ಬಂದ ಹಾದಿ ಹಾಗೂ ಧ್ಯೇಯೋದ್ದೇಶಗಳನ್ನು ವಿವರಿಸಿ, ನಮ್ಮ ಸಂಸ್ಥೆಯು ಅನೇಕ ಮೌಲ್ಯಯುತ ವೈವಿಧ್ಯಮಯ ಚಟುವಟಿಕೆಗಳನ್ನು ಆಯೋಜಿಸುತ್ತಿದೆ. ಇ-ಯಲ್ಲಾಪುರ ಡಿಜಿಟಲ್ ನ್ಯೂಸ್, ಸುಜ್ಞಾನ ವಾಹಿನಿ ಪತ್ರಿಕೆಯ ಮೂಲಕ ನಿತ್ಯ ಸಾವಿರಾರು ಜನರ ನಡುವೆ ಸಂಪರ್ಕ ಸೇತುವಾಗಿ ಕಾರ್ಯನಿರ್ವಹಿಸುತ್ತ, ಎಲ್ಲರ ಸಹಕಾರದೊಂದಿಗೆ ಜನರ ವಿಶ್ವಾಸ ಗಳಿಸಿದೆ ಎಂದರು.
ಸ್ಪರ್ಧೆಯ ನಿರ್ಣಾಯಕರಾಗಿ ಸಹಕರಿಸಿದ ಶಿಕ್ಷಕ ರಾಘವೇಂದ್ರ ಹೆಗಡೆ, ಪತ್ತಾರ್ ಸ್ಟುಡಿಯೊದ ಗಣೇಶ ಪತ್ತಾರ ಅವರನ್ನು ಗೌರವಿಸಲಾಯಿತು.
ಸಮಾರಂಭದಲ್ಲಿ ಸುಜ್ಞಾನ ವಾಹಿನಿ ಪತ್ರಿಕೆಯಲ್ಲಿ ಪ್ರಕಟಿಸಲಾದ ವಿಶೇಷ ಪುರವಣಿಯನ್ನು ಗಣ್ಯರು ಬಿಡುಗಡೆಗೊಳಿಸಿದರು.
ವಿಶ್ರಾಂತ ಪ್ರಾಂಶುಪಾಲ ಬೀರಣ್ಣ ನಾಯಕ ಮೊಗಟಾ, ಗೌತಮ ಜ್ಯುವೆಲರ್ಸ್ನ ಮಾಲೀಕ ಪ್ರಕಾಶ ಶೇಟ್, ಸಾಮಾಜಿಕ ಕಾರ್ಯಕರ್ತರ ವಿಜಯ ಮಿರಾಶಿ, ವಿಕಾಸ ಬ್ಯಾಂಕ್ ಅಧ್ಯಕ್ಷ ಮುರಳಿ ಹೆಗಡೆ, ಮಲೆನಾಡು ಸೊಸೈಟಿ ಅಧ್ಯಕ್ಷ ಎಂ ಆರ್ ಹೆಗಡೆ, ಅಡಿಕೆ ವರ್ತಕರ ಸಂಘದ ಅಧ್ಯಕ್ಷ ರವಿ ಹೆಗಡೆ, ಜಿಲ್ಲಾ ಬಿಜೆಪಿ ರೈತಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿವಲಿಂಗಯ್ಯ ಅಲ್ಲಯ್ಯನಮಠ ಉಪಸ್ಥಿತರಿದ್ದರು.
ಸುಜ್ಞಾನ ಸೇವಾ ಫೌಂಡೇಷನ್ ಕಾರ್ಯದರ್ಶಿ ಜ್ಯೋತಿರಾದಿತ್ಯ ಭಟ್ಟ ಸ್ವಾಗತಿಸಿದರು. ಪತ್ರಕರ್ತ ಶ್ರೀಧರ ಅಣಲಗಾರ ಸನ್ಮಾನಪತ್ರ ವಾಚಿಸಿದರು. ಶಿಕ್ಷಕ ಸಣ್ಣಪ್ಪ ಭಾಗ್ವತ ನಿರ್ವಹಿಸಿದರು. ಶಿಕ್ಷಕ ಎಂ.ರಾಜಶೇಖರ ವಂದಿಸಿದರು.
ಶ್ರೀಪಾದ ಭಟ್ಟ ಅವರು ಕೃಷ್ಣನ ಕುರಿತಾದ ಭಕ್ತಿ ಗೀತೆಗಳನ್ನು ಹಾಡಿದರು. ವಿದುಷಿ ವಿನುತಾ ಹೆಗಡೆ ಅವರ ಭರತನಾಟ್ಯ ಗಮನ ಸೆಳೆಯಿತು.